ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಬಿ.ವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ – vishwanews24

Featured, ರಾಜ್ಯ ನ್ಯೂಸ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ್ದಕ್ಕಾಗಿ ಬಿಜೆಪಿ ನಾಯಕರು ಬೀದಿಗಿಳಿದು ಹೋರಾಟ..

ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ..

ಬಿ.ವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ..

ಬೆಂಗಳೂರು : ಪೆಟ್ರೋಲ್‌, ಡೀಸೆಲ್‌ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಇಂದು ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇದೀಗ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸೈಕಲ್‌ ಜಾಥಾದಲ್ಲಿ ಶಾಸಕ ಡಾ.ಸಿ.ಎನ್‌ ಅಶ್ವಥ್‌ ನಾರಾಯಣ, ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಬಿಜೆಪಿ ಕಚೇರಿಯಿಂದ ಅರ್ಧ ಕಿ.ಮೀ ದೂರದಲ್ಲೇ ಬಿಜೆಪಿ ಜಾಥಾಗೆ ಪೊಲೀಸರು ತಡೆದಿದ್ದು, ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ – vishwanews24

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಅಶ್ವತ್ಥ್‌ ನಾರಾಯಣ ಎಂಎಲ್‌ ಸಿ ಗಳಾದ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Reply