ಪೋಕ್ಸೋ ಪ್ರಕರಣ : ಅ.10 ರವರೆಗೆ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆ :ಕೋರ್ಟ್ ಆದೇಶ – Vishwanews24
ಪೋಕ್ಸೋ ಪ್ರಕರಣ : ಅ.10 ರವರೆಗೆ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆ : ಕೋರ್ಟ್ ಆದೇಶ
ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಜೈಲುಪಾಲಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅಕ್ಟೋಬರ್ 10 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು ಮುರುಘಾ ಶ್ರೀಗಳ ನ್ಯಾಯಾಂಗ ಬಂಧನಅಂತ್ಯವಾದ ಹಿನ್ನೆಲೆ ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ವಿಚಾರಣೆ ನಡೆಸಿದ ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮಠದ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಜೈಲು ಪಾಲಾಗಿರುವ ಮುರುಘಾ ಶ್ರೀ ಜೈಲಿನಿಂದಲೇ ಚೆಕ್, ಮತ್ತಿತರ ದಾಖಲೆಗಳಿ ಸಹಿ ಹಾಕಲು ಅನುಮತಿ ಕೇಳಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು.ಬಳಿಕ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್ ಕೋರ್ಟ್ಗೆ ಮನವಿ ಮಾಡಿದ್ದರು. ಆದ್ರೆ, ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಗ ಮುರುಘಾ ಶರಣರು ಹೈಕೋರ್ಟ್ ಮೊರೆ ಹೋಗಿದ್ದರು.
ಚಿಕ್ಕಮಗಳೂರು : 10ಕ್ಕೂ ಅಧಿಕ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಾರ್ಯಕರ್ತರು ಪೊಲೀಸ್ ವಶಕ್ಕೆ – Vishwanews24
