ಪೌರತ್ವ ಕಾಯ್ದೆ ವಿರುದ್ಧ ಕೇವಲ ಕಾಂಗ್ರೆಸಿಗರು ಮಾತ್ರ ಹೋರಾಟ ಮಾಡುತ್ತಿದ್ದಾರೆ : ನಳಿನ್ ಕುಮಾರ್ ಕಟೀಲ್ -Vishwanews24
ಶಿವಮೊಗ್ಗ: ಪೌರತ್ವ ಕಾಯ್ದೆ ವಿರುದ್ಧ ಕೇವಲ ಕಾಂಗ್ರೆಸಿಗರು ಮಾತ್ರ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಧಕ್ಕೆಯಿಲ್ಲ. ದೇಶದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿಲ್ಲ. ಪೌರತ್ವ ಕಾಯ್ದೆಯನ್ನು ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದು, ರಾಜಕೀಯವಾಗಿ ಆಡವಾಡುತ್ತಿದೆ ಎಂದು ಆರೋಪಿಸಿದ್ದಾರೆ.
