ಪ್ರಜಾದ್ವನಿ ಬಸ್ ಯಾತ್ರೆ ಕಾರ್ಯಕ್ರಮಕ್ಕೆ ದಕ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸುವಂತೆ ಎನ್ಎಸ್ಯುಐ ಆಹ್ವಾನ – Vishwanews24
ಪ್ರಜಾದ್ವನಿ ಬಸ್ ಯಾತ್ರೆ ಕಾರ್ಯಕ್ರಮಕ್ಕೆ ದಕ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸುವಂತೆ ಎನ್ಎಸ್ಯುಐ ಆಹ್ವಾನ
ಮಂಗಳೂರು: ಜನವರಿ 22 ರಂದು ಸಂಜೆ 4 ಗಂಟೆಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಪ್ರಜಾದ್ವನಿ ಬಸ್ ಯಾತ್ರೆ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಎನ್ಎಸ್ಯುಐ ಜಿಲ್ಲಾ ಸಮಿತಿ ಆಹ್ವಾನಿಸಿದೆ.
ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮತ್ತಿತರ ಮುಖಂಡರು ಉಪಸ್ಥಿತರಿರುವರು. ಈ ಸಂದರ್ಭ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ, ಜಿಲ್ಲೆಯಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಬೈಕ್ ರ್ಯಾಲಿ ಹಾಗೂ ಬಸ್ ಯಾತ್ರೆಯ ಭವ್ಯ ಸ್ವಾಗತ ನಡೆಯಲಿದೆ ಎಂದು ಸುಹಾನ್ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ – Vishwanews24
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
