ಪ್ರಣವ್‌ ಮುಖರ್ಜಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ -Vishwanews24

Featured, ರಾಷ್ಟ್ರ ನ್ಯೂಸ್

ಪ್ರಣವ್‌ ಮುಖರ್ಜಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ -Vishwanews24

ನವದೆಹಲಿ : ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣವ್ ಮುಖರ್ಜಿ ಅವರ ಅಂತ್ಯ ಸಂಸ್ಕಾರವು ಸೇನೆಯ ಸಕಲ ಗೌರವಗಳೊಂದಿಗೆ ಮಂಗಳವಾರ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಣವ್ ನಿವಾಸಕ್ಕೆ ಭೇಟಿ ನೀಡಿ ಮಾಜಿ ರಾಷ್ಟ್ರಪತಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಪ್ರಣವ್ ನಿಧನದ ಕಾರಣ ಆಗಸ್ಟ್ 31 ರಿಂದ ಸೆಪ್ಟೆಂಬರ್ 6 ರವರೆಗೆ ದೇಶದಾದ್ಯಂತ ಶೋಕಾಚರಣೆ ಇರಲಿದೆ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 84 ವರ್ಷ ಪ್ರಾಯದ ಪ್ರಣಬ್‌ ಮುಖರ್ಜಿ ಅವರು ಮೆದುಳು ಚಿಕತ್ಸೆಯ ಬಳಿಕ ಕೋಮಾಕ್ಕೆ ಜಾರಿದ್ದು ಸೋಮವಾರ ಕೊನೆಯುಸಿರೆಳೆದಿದ್ದಾರೆ. ಚಿಕಿತ್ಸೆಗೂ ಮುನ್ನ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು.

ಅಂತಿಮ ಕ್ರಿಯೆಗೂ ಮುನ್ನ ಪ್ರಣವ್ ಅವರ ಪಾರ್ಥಿವ ಶರೀರದ ದರ್ಶನಕ್ಕಾಗಿ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಅವರ ಅಧಿಕೃತ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಕೊರೊನಾ ಮಾರ್ಗಸೂಚಿಯಂತೆ ಅಂತಿಮ ವಿಧಿಗಾಗಿ ಮೃತದೇಹವನ್ನು ತೆರೆದ ವಾಹನದ ಬದಲು ಶವ ಸಾಗಾಟ ವಾಹನದಲ್ಲಿಯೇ ಕೊಂಡೊಯ್ಯಲಾಗುತ್ತದೆ. ಅಂತ್ಯಕ್ರಿಯೆ ಲೋದಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ನಡೆಯಲಿದೆ.