ಪ್ರತಿಭಟನೆಯಲ್ಲಿ ಕಲ್ಲು ಹೊಡೆದವರು, ಬೆಂಕಿ ಹಚ್ಚಿದವರು ನಮ್ಮ ಕಾರ್ಯಕರ್ತರಲ್ಲ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಹುಬ್ಬಳ್ಳಿ: ಮಾಜಿ ಸಚಿವ, ಕಾಂಗ್ರೆಸ್​ ಮುಖಂಡ ಡಿ.ಕೆ ಶಿವಕುಮಾರ್ ಅವರ ಬಂಧನದ ಬಳಿಕ ನಡೆದ ಹಿಂಸಾತ್ಮಕ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಲ್ಲು ಹೊಡೆದವರು, ಬೆಂಕಿ ಹಚ್ಚಿದವರು ನಮ್ಮ ಕಾರ್ಯಕರ್ತರಲ್ಲ ಎಂದು ಅವರು ಗುರುವಾರ ಸ್ಪಷ್ಟನೆ ನೀಡಿದರು.

ಗಂಡುಮೆಟ್ಟಿದ ನಾಡಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮವರ ಪ್ರತಿಭಟನೆಯಲ್ಲಿ ಕೆಲ ಕಿಡಿಗೇಡಿಗಳು ಸೇರಿ ಕೊಂಡಿದ್ದಾರೆ, ಶಾಂತಿಯುತ ಪ್ರತಿಭಟನೆ ನಡೆಸುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಡಿ.ಕೆ ಶಿವಕುಮಾರ್ ಅವರ ಬಂಧನ ರಾಜಕೀಯ ಪ್ರೇರಿತ ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ತಿಳಿಸಿದರು.

ಈ ಸರ್ಕಾರಕ್ಕೆ ಕಣ್ಣು-ಕಿವಿ ಎರಡೂ ಇಲ್ಲ, ಕೋಯ್ನಾದಿಂದ ನೀರು ಬೀಡುವ ವಿಚಾರದಲ್ಲಿ ಸಮನ್ವಯ ಕೊರತೆ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಕಾಂಗ್ರೆಸ್​ ಹಿರಿಯ ಮುಖಂಡ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.