ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ, ಭಯ ಹುಟ್ಟಿಸುವವರನ್ನು ಭಯೋತ್ಪಾದಕರು ಎನ್ನಲಾಗುತ್ತಿದೆ : ಸಿದ್ದರಾಮಯ್ಯ – Vishwnaews24

Featured, ರಾಜ್ಯ ನ್ಯೂಸ್

ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ, ಭಯ ಹುಟ್ಟಿಸುವವರನ್ನು ಭಯೋತ್ಪಾದಕರು ಎನ್ನಲಾಗುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು: ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ, ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಆರ್ ಎಸ್‌ಎಸ್ ವಿರುದ್ಧ ಕಿಡಿಕಾರಿ ಮಾಜಿ‌ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ” ಆರ್.ಎಸ್.ಎಸ್ ಕಂಡರೆ ನನಗೆ ಭಯ ಎಂದು‌ ಮಾಜಿ‌ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ ಎಸ್ ಎಸ್ ಕಂಡರೆ ಭಯ ಇದೆ. ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡ ಅವರು ಯಾಕೆ ತನ್ನ‌ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ರಶೀದ್ ಜಟ್ಟಿಪಳ್ಳ ನೇಮಕ – Vishwnaews24

ಆರ್.ಎಸ್.ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್ ಎಸ್‌ಎಸ್ ಮೇಲೆ ದೇಶದ ಮೊದಲ ಗೃಹಸಚಿವ‌ ವಲ್ಲಭಭಾಯಿ‌ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ. ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ‌ ಸಮುದಾಯಗಳಂತೆ ನನಗೂ ಆರ್ ಎಸ್‌ಎಸ್ ಕಂಡರೆ ಭಯ ಎಂದು ಹೇಳಿದ್ದಾರೆ

ಮೀಸಲಾತಿ, ಭೂಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರ್ ಎಸ್‌ಎಸ್ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್ ಎಸ್‌ಎಸ್ ಬಗ್ಗೆ ಬಗ್ಗೆ ಭಯ ಸಹಜ ಅಲ್ಲವೇ ಡಿ.ವಿ. ಸದಾನಂದಗೌಡರೇ ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ‌ ಆತ್ಮಾವಲೋಕನ‌ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ ಎಂದು ಹೇಳಿದ್ದಾರೆ

ಉಡುಪಿ : ಜೂ.25ರಂದು ಕುಂದಾಪುರದಲ್ಲಿ ಉದ್ಯೋಗ ಮೇಳ – Vishwanews24

 

 

Leave a Reply