ಪ್ರತಿಷ್ಠಿತ ಕದಂಬ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ -Vishwanews24
ಮಂಗಳೂರು: ಸಹಕಾರ, ಸಾಮಾಜಿಕ, ಬ್ಯಾಂಕಿಂಗ್, ಧಾರ್ಮಿಕ ಸೇರಿದಂತೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಪ್ರತಿಷ್ಠಿತ ಕದಂಬ ರಾಜ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ರಾಮನಗರದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ನೀಡುವ ಈ ಪ್ರಶಸ್ತಿಯ ಪ್ರದಾನ ಸಮಾರಂಭ ಫೆ. 29ರಂದು ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಜೇಂದ್ರ ಕುಮಾರ್ ಅವರ ಅಧ್ಯಕ್ಷ ಅವಧಿಯಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿ ಅಗ್ರಸ್ಥಾನಕ್ಕೇರಿದೆ. ರಾಜ್ಯದ ಅತ್ಯುತ್ತಮ ಡಿಸಿಸಿ ಬ್ಯಾಂಕುಗಳಿಗೆ ನೀಡುವ ರಾಜ್ಯ ಅಪೆಕ್ಸ್ ಬ್ಯಾಂಕ್ ರಾಜ್ಯ ಪ್ರಶಸ್ತಿ ಎಸ್ ಸಿಡಿಸಿಸಿ ಬ್ಯಾಂಕಿಗೆ 19 ವರ್ಷಗಳಿಂದ ಲಭಿಸುತ್ತಿದೆ. ನವೋದಯ ಸ್ವಸಹಾಯ ಸಂಘಗಳ ಸಮರ್ಪಕ ಅನುಷ್ಠಾನಕ್ಕಾಗಿ 18 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ.
ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಮತ್ತು ಸಾಮಾಜಿಕ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಈಗಾಗಲೇ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.
