ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ : ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ – Vishwanews24
ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ : ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ
ಬೆಂಗಳೂರು : ಸರ್ಕಾರದಿಂದಲೇ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರ ಹಬ್ಬಿದ ಬೆನ್ನಲ್ಲೇ ‘ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ’ ಎಂದು ಎಂದು ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸರ್ಕಾರದಿಂದಲೇ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ ಅನ್ನೋ ವಿಚಾರ ಕೇಳಿಬರುತ್ತಿದೆ. ಇಂತಹ ಯಾವುದೇ ಪ್ರಸ್ತಾವನೆಯನ್ನು ಶಿಕ್ಷಣ ಇಲಾಖೆ ಸಲ್ಲಿಸಿಲ್ಲ. ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವ ಉದ್ದೇಶ ಸರ್ಕಾರಕ್ಕೂ ಇಲ್ಲ ಎಂದು ತಿಳಿಸಿದ್ದಾರೆ.
