ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಬಿಲ್ಲವ ಯುವ ವೇದಿಕೆಯಿಂದ ಎಸ್ಪಿ – ಉಸ್ತುವಾರಿ ಸಚಿವರಿಗೆ ಮನವಿ – vishwanews24

Featured, ಉಡುಪಿ

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಲು ಬಿಲ್ಲವ ಯುವ ವೇದಿಕೆ ಆಗ್ರಹ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಹಿಂದಿರುವ ಸತ್ಯಾಸತ್ಯತೆ ಸಂಪೂರ್ಣವಾಗಿ ಹೊರತರಬೇಕು ಮತ್ತು ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಸೋಮವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರಕರಣದ ನಿಷ್ಪಕ್ಷವಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ತನಿಖೆಯಲ್ಲಿ ಯಾವುದೇ ವ್ಯಕ್ತಿಯ ತಪ್ಪು ದೃಢಪಟ್ಟಲ್ಲಿ ಕಾನೂನು ಬದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಕರ್ತವ್ಯ ಲೋಪ ಎಸಗಿದ ಹಿರಿಯಡ್ಕ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಪೂಜಾರಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕುಂದಾಪುರ:  ಟಿಪ್ಪರ್-ಸ್ಕೂಟರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಸಾವು – vishwanews24

Leave a Reply