ಪ್ರಧಾನಿ ನರೇಂದ್ರ ಮೋದಿ ನಿಸ್ವಾರ್ಥ ಹಾಗೂ ದೇಶ ಪ್ರೇಮಿ ಆಗಿದ್ದರಿಂದ ಎರಡನೇ ಬಾರಿಗೆ ಪ್ರಧಾನಿಯಾಗುವ ಯೋಗ ಅವರನ್ನು ಹುಡುಕಿಕೊಂಡು ಬಂದಿದೆ : ಜಿ.ಟಿ.ದೇವೇಗೌಡ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಬೆಳಗಾವಿ:  ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಹೊಗಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೆಳಗಾವಿ ನಗರದ ವಿಟಿಯು ಸಭಾಂಗಣದಲ್ಲಿ ಬುಧವಾರ ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಿಸ್ವಾರ್ಥ ಹಾಗೂ ದೇಶ ಪ್ರೇಮಿ ಆಗಿದ್ದರಿಂದ ಎರಡನೇ ಬಾರಿಗೆ ಪ್ರಧಾನಿಯಾಗುವ ಯೋಗ ಅವರನ್ನು ಹುಡುಕಿಕೊಂಡು ಬಂದಿದೆ.

ಅವರಿಗೆ ದೇಶದ ಬಗ್ಗೆ ಸಾಕಷ್ಟುಗೌರವ, ಅಭಿಮಾನ ಇದೆ. ಯಾವಾಗಲೂ ದೇಶದ ಬಗ್ಗೆಯೇ ಚಿಂತಿಸುತ್ತಾರೆ. ನಿಸ್ವಾರ್ಥ ಭಾವದಿಂದ ದೇಶಸೇವೆ ಮಾಡುತ್ತಿದ್ದಾರೆ. ಅವರಿಗೆ ನಾನು ಕೂಡ ಒಬ್ಬ ಸಂಸದ ಎನ್ನುವಷ್ಟರ ಮಟ್ಟಿಗೆ ಸರಳತೆ ಇದೆ. ದೇಶಕ್ಕಾಗಿ ನನ್ನ ಜೀವನ ಎಂಬ ಅವರ ಹೇಳಿಕೆ ನನಗೆ ಇಷ್ಟವಾಗಿದೆ ಎಂದು ಬಣ್ಣಿಸಿದರು.

ಮೈತ್ರಿ ಸರ್ಕಾರವನ್ನು ಅತಂತ್ರಗೊಳಿಸುವ ಉದ್ದೇಶ ಪ್ರಧಾನಿ ಮೋದಿ ಅವರಿಗಿಲ್ಲ. ಲೋಕಸಭೆ ಚುನಾವಣೆ ನಂತರ ತಮ್ಮ ಭಾಷಣದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಮೋದಿ ಹೇಳಿದ್ದಾರೆ ಎಂದರು. ಮೋದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದೇನೆ ಹೊರತು, ಬಿಜೆಪಿ ಸೇರುವ ಉದ್ದೇಶದಿಂದ ಹೇಳಿಲ್ಲ ಎಂದರು.