ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ -Vishwanews24
ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ -Vishwanews24
ವಾಷಿಂಗ್ಟನ್: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಅಮೆರಿಕ ಸಶಸ್ತ್ರ ಪಡೆ ವತಿಯಿಂದ ದೇಶದ ಮುಖ್ಯಸ್ಥರಿಗೆ ಅಥವಾ ಸರ್ಕಾರಕ್ಕೆ ನೀಡಲಾಗುತ್ತಿತ್ತು .
ಕಳೆದ ಕೆಲವು ವರ್ಷಗಳಿಂದ ಮೋದಿ ಅಮೆರಿಕ ಮತ್ತು ಭಾರತ ದೇಶಗಳ ನಡುವೆ ಕಾರ್ಯತಂತ್ರದ ಸಹಭಾಗಿತ್ವವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭಾರತವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವಲ್ಲಿ ಕೂಡ ಮೋದಿ ಅವರ ನಾಯಕತ್ವ ಅಪಾರ ಎಂದು ಹೇಳಿರುವ ಅಮೆರಿಕ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಪ್ರಧಾನಿ ಮೋದಿ ಜೊತೆಗೆ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಹಾಗೂ ಜಪಾನ್ ಮಾಜಿ ಪ್ರಧಾನಿ ಶಿನ್ಸೊ ಅಬೆ ಅವರಿಗೂ ಲೀಜನ್ ಆಫ್ ಮೆರಿಟ್ ಅವಾರ್ಡ್ ದೊರೆತಿದೆ.
ಅಮೆರಿಕದಲ್ಲಿ ಭಾರತೀಯ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಅವರು ಪ್ರಧಾನಿ ಮೋದಿ ಪರವಾಗಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒ ಬ್ರಿಯನ್ ಅವರಿಂದ ಪ್ರಶಸ್ತಿಯನ್ನು ಶ್ವೇತಭವನದಲ್ಲಿ ಸ್ವೀಕರಿಸಿದರು. ಆಸ್ಟ್ರೇಲಿಯಾ ಮತ್ತು ಜಪಾನ್ ರಾಯಬಾರಿಗಳು ತಮ್ಮ ಪ್ರಧಾನಿ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
