ಪ್ರಧಾನಿ ಮೋದಿ ‘ಭಾರತ್ ಮಾತಾ ಕೀ ಜೈ’ ಹೇಳಬಾರದು : ರಾಹುಲ್ ಗಾಂಧಿ
ಜೈಪುರ: ಪ್ರಧಾನಿ ನರೇಂದ್ರ ಮೋದಿ ಭಾರತ್ ಮಾತಾ ಕೀ ಜೈ ಬದಲು ಅಂಬಾನಿ ಕೀ ಜೈ ಎಂದು ಹೇಳಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಚುನಾವಣಾ ನಿಮಿತ್ತ ರಾಜಸ್ಥಾನದ ಆಲ್ವಾರ್‍ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಎಲ್ಲೇ ಹೋಗಲಿ, ತಮ್ಮ ಭಾಷಣಗಳಲ್ಲಿ ಮೊದಲು ‘ಭಾರತ್ ಮಾತಾ ಕೀ ಜೈ’ ಎನ್ನುವ ಘೋಷ ವಾಕ್ಯವನ್ನು ಹೇಳುತ್ತಾರೆ. ಭಾರತ ಮಾತೆ ದೇಶದ ರೈತರು, ಯುವಜನತೆ, ಮಹಿಳೆಯರು ಹಾಗೂ ಕಾರ್ಮಿಕರ ಭಾವನೆಗೆ ಸಂಬಂಧಿಸಿದ್ದಾಗಿದೆ. ಆದರೆ ಮೋದಿ ಅವರು ಉದ್ಯಮಿ ಅಂಬಾನಿಗಾಗಿ ಕೆಲಸ ಮಾಡುತ್ತಾರೆ. ಹೀಗಾಗಿ ಮೋದಿ ‘ಭಾರತ್ ಮಾತಾ ಕೀ ಜೈ’ ಎನ್ನುವ ಬದಲು, ‘ಅನಿಲ್ ಅಂಬಾನಿ ಕೀ ಜೈ’, ‘ನೀರವ್ ಮೋದಿ ಕೀ ಜೈ’ ಎಂದು ಹೇಳಬೇಕೆಂದು ವ್ಯಂಗ್ಯವಾಡಿದ್ದಾರೆ,

2014ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆಗಳು ಈಡೇರಿಲ್ಲ. ಪ್ರಧಾನಿ ಮೋದಿಯವರ ಭರವಸೆಯಂತೆ ಉದ್ಯೋಗಗಳು ಸೃಷ್ಟಿಯಾಗಿದ್ದರೇ, ಆಲ್ವಾರ್ ನಲ್ಲಿ ಯುವಕರೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಭಾರತ್ ಮಾತೆ ರೈತರ, ದೇಶದ ಯುವಜನತೆಯ, ಮಹಿಳೆಯರ ಕಾರ್ಮಿಕರ ಭಾವನೆಗೆ ಸಂಬಂಧಿಸಿದ್ದಾಗಿದೆ, ಭಾರತ ಮಾತೆ ಬಗ್ಗೆ ಮಾತಾಡುತ್ತೀರಿ ಎಂದಾದರೆ ನೀವು ರೈತರನ್ನು ಹೇಗೆ ನಿರ್ಲಕ್ಷಿಸಲು ಸಾಧ್ಯ ಎಂದು ಮೋದಿಗೆ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

