ಪ್ರಧಾನಿ ಮೋದಿ ಸರ್ಕಾರಕ್ಕೆ ಮತೊಂದು ಗರಿ: 7 ವರ್ಷದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಉದ್ಯೋಗ ಸೃಷ್ಟಿ!
ಭಾರತದಲ್ಲಿ ಕಳೆದ 7 ವರ್ಷದಲ್ಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.
ಮಾರ್ಚ್ ತಿಂಗಳಲ್ಲಿ ಭಾರತದ ಸೇವಾ ವಲಯದ ಚಟುವಟಿಕೆಗಳಲ್ಲಿ ಬೆಳವಣಿಗೆ ದಾಖಲಾಗಿದ್ದು, ಹೊಸ ಉದ್ಯೋಗಗಳ ಸೃಷ್ಟಿಯ ಪರಿಣಾಮ ಎಂದು ಸಮೀಕ್ಷೆಯ ವರದಿಯಲ್ಲಿ ವಿಶ್ಲೇಷಿಸಲಾಗಿದೆ. ಕಳೆದ 7 ವರ್ಷಗಳಲ್ಲಿ ಮೊದಲ ಬಾರಿಗೆ ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚಳವಾಗಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ.
ಇನ್ನು ಉದ್ಯಮದ ಕಾರ್ಯನಿರ್ವಹಣೆಯ ಇಂಡೆಕ್ಸ್ ನಲ್ಲಿಯೂ ಏರಿಕೆ ಕಂಡುಬಂದಿದ್ದು, ಸ್ಥಿರತೆ ಕಾಯ್ದುಕೊಂಡಿದೆ, ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಸರ್ಕಾರ ಕೈಗೊಂಡ ಕ್ರಮಗಳಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಉದ್ಯೋಗಗಳನ್ನು ಪಡೆಯುತ್ತಿದ್ದಾರೆ. ಇದು 2011 ರ ಜೂನ್ ತಿಂಗಳಿನ ನಂತರ ಅತಿ ಹೆಚ್ಚು ಹಾಗೂ ತ್ವರಿತವಾಗಿ ಏರಿಕೆಯಾದ ದಾಖಲೆಯಾಗಿದೆ. 