ಪ್ರಧಾನಿ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ : ಪ್ರಭು ಚವಾಣ್ -Vishwanews24

Featured, ರಾಷ್ಟ್ರ ನ್ಯೂಸ್

ಪ್ರಧಾನಿ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ : ಪ್ರಭು ಚವಾಣ್ -Vishwanews24

ಔರಾದ್: ‘ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ’ ಎಂದು ಸಚಿವ ಪ್ರಭು ಚವಾಣ್ ತಿಳಿಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಧೋಡಿಬಾ ನರೋಟೆ ಹಾಗೂ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಆಡಳಿತದ ಅವಧಿ ಹಾಗೂ ಈಗಿನ ಬಿಜೆಪಿ ಸರ್ಕಾರದ ಜನಪರ ಆಡಳಿತದ ಕುರಿತು ಜನರು ತುಲನೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ವಿಭಾಗೀಯ ಪ್ರಮುಖ ಈಶ್ವರಸಿಂಗ ಠಾಕೂರ್ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಚವಾಣ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಿರೀಶ್ ವಡೆಯರ್, ಎಪಿಎಂಸಿ ಅಧ್ಯಕ್ಷ ರಂಗರಾವ ಜಾಧವ್, ಬಿಜೆಪಿ ಧುರೀಣ ಬಾಬುರಾವ ಮದಕಟ್ಟಿ, ಹರಹಂತ ಸಾವಳೆ, ಕಿರಣ ಪಾಟೀಲ, ರಾಮಶೆಟ್ಟಿ ಪನ್ನಾಳೆ, ಖಂಡೋಬಾ ಕಂಗಟೆ, ಕೇರಬಾ ಪವಾರ್, ಕುಮಾರ ದೇಶಮುಖ, ಶ್ರೀನಿವಾಸ ಖೂಬಾ, ಶೀಮಂತ ಪಾಟೀಲ ಹೆಡಗಾಪುರ, ಅಮೃತರಾವ ವಟಗೆ, ಪ್ರಕಾಶ ಜೀರ್ಗೆ, ರಾಮ ನರೋಟೆ, ಬಾಲಾಜಿ ನರೋಟೆ ಇದ್ದರು. ಸಭೆಯಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಗುಂಡಪ್ಪ ‌ಮುದಾಳೆ, ಎಪಿಎಂಸಿ ಸದಸ್ಯ ಗೋವಿಂದರಾವ್ ಸೇರಿದಂತೆ ಹಲವರು ಬಿಜೆಪಿ ಸೇರಿದರು.