ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪುತ್ತೂರು ಮತ್ತು ಸುಳ್ಯದ 32 ಕಡೆ NIA ದಾಳಿ – Vishwanews24
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪುತ್ತೂರು ಮತ್ತು ಸುಳ್ಯದ 32 ಕಡೆ NIA ದಾಳಿ
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ.
ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯನ್ನು ಎನ್‌ಐಎ ತಂಡ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಮಾಹಿತಿಯನ್ನಾಧರಿಸಿ 32 ಕಡೆ ಮನೆ ಹಾಗೂ ಕೆಲ ಖಾಸಗಿ ಕಟ್ಟಡಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಘಟನೆಗೆ ಸಂಬಂಧಿಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆಗೆ ಒಳಪಡಿಸಿದೆ. ಎನ್ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಾಥ್ ನೀಡಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ಮಂಗಳೂರು : ಒತ್ತಾಯದ ಮದುವೆ.. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ – Vishwanews24
