ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲ : ಎಸ್. ಅಂಗಾರ – Vishwanews24
ನಾನು ಇನ್ನು ರಾಜಕಾರಣದಲ್ಲಿಲ್ಲ, ಚುನಾವಣಾ ಪ್ರಚಾರದಲ್ಲೂ ಇರುವುದಿಲ್ಲ..
ನನ್ನ ಪ್ರಾಮಾಣಿಕತೆಯೇ ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ..
ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು..
ಬೆಂಗಳೂರು: ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರಿಗೆ ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದ್ದು, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ಈಗ ರಾಜಕಾರಣದಲ್ಲಿಲ್ಲ. ಆದ್ದರಿಂದ ಹೊಸ ಅಭ್ಯರ್ಥಿ ಹಾಗೂ ಅವರ ಗೆಲುವಿನ ಬಗ್ಗೆ ಪಕ್ಷವೇ ನೋಡಿಕೊಳ್ಳಬಹುದು ಎಂದು ಶಾಸಕ ಎಸ್. ಅಂಗಾರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಯಾವುದೇ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ಈಗ ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ – Vishwanews24
ರಾಜ್ಯ ರಾಜಕಾರಣದಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆಯುವುದಕ್ಕೆ ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಆದರೆ, ಟಿಕೆಟ್‌ಗೆ ಲಾಬಿ ಮಾಡಿದರುವುದೇ ನನಗೆ ತೀವ್ರ ಹಿನ್ನಡೆಯಾಯಿತು. ಇನ್ನು ನಾನು ಈಗಾಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡಿಯಾಗಿದೆ. ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ನಾನು ಇರುವುದಿಲ್ಲ. ಈಗ ಬಿಜೆಪಿ ಪಟ್ಟಿಯಲ್ಲಿ ಘೋಷಣೆ ಮಾಡಿರುವ ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಖಾರವಾಗಿಯೇ ಹೇಳಿದರು.
ಉಳ್ಳಾಲ: ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯುತ್ತೇವೆ : ಸತೀಶ್ ಕುಂಪಲ – Vishwanews24
