ಫೆ.20 ರಂದು ಕಾರ್ಕಳ, ಕಾಪುವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ : ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ -Vishwanews24
ಫೆ20 : ಕಾರ್ಕಳ, ಕಾಪುವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ : ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ -Vishwanews24
ಉಡುಪಿ: ರಾಜ್ಯ ಗೃಹ ಮತ್ತ ಕಾನೂನು, ಸಂಸದೀಯ ವ್ಯವಹಾರಗಳು & ಶಾಸನ ರಚನಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 20ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬೆಳಿಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುವ ಸಚಿವರ 11 ಗಂಟೆಗೆ ಕಾರ್ಕಳ ನಗರ ಠಾಣೆಯ ಬಳಿ ನೂತನವಾಗಿ ನಿರ್ಮಿಸಲಾಗಿರುವ ಕಾರ್ಕಳ ಪೊಲೀಸ್ ವಸತಿ ಗೃಹದ ಉದ್ಘಾಟನೆ ನೆರವೇರಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ನ್ಯಾಯಾಂಗ, ಉಡುಪಿ ಲೋಕೋಪಯೋಗಿ ಇಲಾಖೆ, ಉಡುಪಿ ಹಾಗೂ ವಕೀಲರ ಸಂಘ, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಿರುವ ನ್ಯಾಯಾಲಯಗಳ ಸಂಕೀರ್ಣದ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಕಾಪು ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಿಸಿರುವ ಕಾಪು ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರಿಕೆ : ಮಹಿಳೆಯರತ್ತ ಕನಿಕರ ತೋರದ ಹಗಲು ದರೋಡೆಯ ಸರಕಾರ : ರಮಾನಾಥ ರೈ -Vishwanews24
