ಫೆ. 26ರಂದು ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ -Vishwanews24

Featured, ರಾಜ್ಯ ನ್ಯೂಸ್

ಫೆ. 26ರಂದು ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ -Vishwanews24

ಬೆಂಗಳೂರು, : ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಇದೇ 26ರಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಕೆಲವು ದಿನಗಳಿಂದ ಶರತ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗುವ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಅವರು ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದು ಈಗ ಸೇರ್ಪಡೆ ದಿನ ನಿಗದಿಯಾಗಿದೆ. 26ರಂದು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶರತ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ಸೇರಿದ ಬಳಿಕ, ಮಾಚ್೯ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್‌ ಪಕ್ಷದ ಬೃಹತ್ ಸಮಾವೇಶ ನಡೆಸಿ ತಮ್ಮ ಶಕ್ತಿ ಪ್ರದರ್ಶನಸಲು ಶರತ್ ತೀರ್ಮಾನಿಸಿದ್ದಾರೆ.

ಆಸ್ಟ್ರೇಲಿಯಾ ಲಿಬರಲ್‌‌‌‌‌‌ ಪಾರ್ಟಿಯಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ಉಡುಪಿಯ ಶಿಲ್ಪಾ ಹೆಗ್ಡೆ ಆಯ್ಕೆ -Vishwanews24

2018ರ ವಿಧಾನಸಭೆ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ದ ಸೋಲನುಭವಿಸಿದ್ದರು. ಎಂ.ಟಿ.ಬಿ ನಾಗರಾಜ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು. ಬಳಿಕ ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್‌, ಬಿಜೆಪಿಯಿಂದ ಟಿಕೆಟ್‌ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಸೋಲು ಕಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.

1 ನಿಮಿಷದಲ್ಲಿ ಹತ್ತು ಶ್ಲೋಕ : ಇಂಡಿಯಾಸ್‌‌ ವರ್ಲ್ಡ್‌ ರೆಕಾರ್ಡ್‌ಗೆ ಪಾತ್ರರಾದ 3ರ ಹರೆಯದ ಮಂಗಳೂರಿನ ಬಾಲಕಿ ಆದ್ರಿತಿ -Vishwanews24