ಬಂಟ್ವಾಳ : ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ – vishwanews24
ಬಂಟ್ವಾಳ : ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27), ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23)ನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಕಾಪು: ಕಟಪಾಡಿ ಏಣಗುಡ್ಡೆಯ ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ – vishwanews24
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು,ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
