ಬಂಟ್ವಾಳ: ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಗರ್ಭಿಣಿ ಸಾವು – Vishwanews24
ಬಂಟ್ವಾಳ: ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಗರ್ಭಿಣಿ ಸಾವು
ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ನಡೆದಿದೆ.
ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಫೆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಮಾರು ೧೦ ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ಕಾಲ ಮಕ್ಕಳಾಗಿರಲಿಲ್ಲ, ಪ್ರಸ್ತುತ ಚೊಚ್ಚಲ ಗರ್ಭಿಣಿಯಾಗಿದ್ದರು.
Karnataka Budget – ಬಜೆಟ್ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ – Vishwanews24
ಹಲವು ವರ್ಷಗಳ ಕಾಲ ಸರಪಾಡಿ ಗ್ರಾಮ ಕರಣಿಕರ ಕಚೇರಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ, ಅವರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.
