ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಯಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ – vishwanews24
ಬಂಟ್ವಾಳ : ರಸ್ತೆಯಲ್ಲೇ ಕೆಟ್ಟು ನಿಂತಿದ್ದ ಲಾರಿಯಲ್ಲಿ ಪರಿಶೀಲನೆ ವೇಳೆ ಅಕ್ರಮ ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ – ಪ್ರಕರಣ ದಾಖಲು
ಬಂಟ್ವಾಳ: ಸಾರ್ವಜನಿಕ ರಸ್ತೆಯಲ್ಲಿ ದುರಸ್ತಿಗೀಡಾಗಿ ನಿಂತಿದ್ದ ಲಾರಿಯಲ್ಲಿ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಿಸುತ್ತಿರುವುದು ಪತ್ತೆಯಾಗಿದ್ದು, ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಲಾರಿಯೊಂದು ದುರಸ್ತಿಗೀಡಾಗಿ ನಿಂತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಕೆಎ 21 ಸಿ 4608 ನೋಂದಣಿ ಸಂಖ್ಯೆಯ ಲಾರಿ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ.
ಉತ್ತರ ಪ್ರದೇಶ : ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ – vishwanews24
ಲಾರಿಯ ಚಾಲಕ, ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಇರ್ಫಾನ್ ಪಾಷಾ (40) ಅವರನ್ನು ವಿಚಾರಿಸಿದಾಗ, ಲಾರಿ ದುರಸ್ತಿಗೀಡಾಗಿರುವುದಾಗಿ ತಿಳಿಸಿದ್ದಾರೆ. ಲಾರಿಯಲ್ಲಿದ್ದ ಮಣ್ಣಿನ ಸಾಗಾಟದ ಬಗ್ಗೆ ಪರಿಶೀಲಿಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣನ್ನು ಸಾಗಿಸುತ್ತಿರುವುದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 229/2026ರಂತೆ ಬಿಎನ್ಎಸ್ 2023ರ ಕಲಂ 303(2), ಎಂಎಂಡಿಆರ್ ಕಾಯ್ದೆ 1957ರ ಕಲಂ 4(1), 4(1ಎ), 21 ಹಾಗೂ ಕರ್ನಾಟಕ ಸಣ್ಣ ಖನಿಜ ರಿಯಾಯಿತಿ ನಿಯಮಗಳು 1994ರ ಕಲಂ 3, 44ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
ಉತ್ತರ ಪ್ರದೇಶ : ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ – vishwanews24
