ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ -vishwanews24
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ
ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕಲ್ಲಡ್ಕ ಫ್ಲೈಓವರ್ ಮೇಲೆ ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ 20ಕ್ಕೂ ಅಧಿಕ ದನಗಳು ಪತ್ತೆಯಾಗಿವೆ.
ಮಾಹಿತಿ ಪಡೆದ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ದನಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ದನಗಳು ಎಲ್ಲಿಂದ ತರಲಾಗಿತ್ತು ಹಾಗೂ ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದ್ದು, ಬಂಟ್ವಾಳ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
