ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿ ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿ ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲ್‌ಐಸಿ ಕಚೇರಿ ಮುಂಭಾಗ ನಡೆದಿದೆ.

ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50) ಮೃತ ಮಹಿಳೆ. ಮೃತರ ಪತಿ ಎಲ್‌ಐಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮ ಇದ್ದ ಕಾರಣ ಸರಸ್ವತಿ ಅವರು ಬಂದಿದ್ದರು. ಎಲ್‌ಐಸಿ ಕಚೇರಿಯಿಂದ ಮರಳುತ್ತಿರುವಾಗ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ಸೈಬರ್ ವಂಚನೆ ಪ್ರಕರಣದ ಆರೋಪಿ ಜೊತೆ ಸೆಲ್ಫಿ: ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಅಮಾನತು – vishwanews24

ತಲೆಯ ಭಾಗಕ್ಕೆ ಗಾಯಗಳಾಗಿದ್ದ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಸೈಬರ್ ವಂಚನೆ ಪ್ರಕರಣದ ಆರೋಪಿ ಜೊತೆ ಸೆಲ್ಫಿ: ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಅಮಾನತು – vishwanews24

Leave a Reply