ಬಂಟ್ವಾಳ : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ಮೃತ್ಯು – Vishwanews24

Featured, ದಕ್ಷಿಣ ಕನ್ನಡ

 ಬಂಟ್ವಾಳ:ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ  : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ ಅಶ್ರಾ (11) ಹಾಗೂ ಇಲ್ಯಾಸ್ ಅವರ ಪುತ್ರಿ ಮರಿಯಮ್ ನಾಶಿಯಾ (14) ಎಂದು ಗುರುತಿಸಲಾಗಿದೆ.

ಮೂಲತಃ ನಾವೂರ ನಿವಾಸಿಯಾದ ಇಲ್ಯಾಸ್ ಇಂದು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದು, ಮನೆಯವರ ಮುಂದೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ವೇಳೆ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.

ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗುವುದನ್ನು ಮನೆಯವರು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply