ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ ಮೃತದೇಹ ಪತ್ತೆ – Vishwanews24
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ ಮೃತದೇಹ ಪತ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ ಪತ್ತೆಯಾಗಿದೆ.
ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26)ಯವರ ಮೃತದೇಹ ದೊರೆತಿದೆ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ಪತ್ತೆಯಾಗಿದೆ.
ಸೇತುವೆಯಲ್ಲಿ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮೃತದೇಹ ಪತ್ತೆಯಾಗಿದೆ.

ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯವಾಗಿ ಅನುಮಾನ ಎದ್ದಿದ್ದು, ಆತ್ಮಹತ್ಯೆ ಅಥವಾ ಅಪಘಾತವೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ವಿಐಪಿ ಹಜ್ ಕೋಟಾ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ – Vishwanews24
