ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ

ಬಂಟ್ವಾಳ: ಸಜಿಪನಡು ಗ್ರಾಮದ ತಲೆಮೊಗರುವಿನಲ್ಲಿ ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಾಡಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರ ಪತ್ತೆಯಾಗಿದೆ.

ಅಶ್ವಿತ್ (19) ಶವವಾಗಿ ಪತ್ತೆಯಾದ ಯುವಕ. ತಲೆಮೊಗರು ನಾಗೇಶ್ ಗಾಣಿಗ ಅವರ ಮನೆಯಲ್ಲಿ ಮಗುವಿನ ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಅಶ್ವಿತ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಲೆಮೊಗರು ನೇತ್ರಾವತಿ ನದಿಯಲ್ಲಿ ಸಂಬಂಧಿಕ ಸ್ನೇಹಿತರೊಂದಿಗೆ ಅಶ್ವಿತ್ ಈಜಾಡಲು ತೆರಳಿದ್ದರು. ಈ ವೇಳೆ ಅಶ್ವಿತ್ ಮತ್ತು ಹರ್ಷ ಎಂಬಾತ ನೀರುಪಾಲಾಗಿದ್ದಾರೆ. ಈ ವೇಳೆ ಜತೆಯಲ್ಲಿದ್ದ ಇತರ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದರಾದರೂ ಅಶ್ವಿತ್‌ನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಗೆಳೆಯರು ನೋಡನೋಡುತ್ತಿದ್ದಂತೇ ಅಶ್ವಿತ್ ನೀರುಪಾಲಾಗಿ ನಾಪತ್ತೆಯಾಗಿದ್ದರು.

ನಾಪತ್ತೆಯಾಗಿದ್ದ ಅಶ್ವಿನ್‌ಗಾಗಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು. ಇಂದು ಬೆಳಗ್ಗೆ ಕೋಡಿಯ ಸಮುದ್ರತೀರದಲ್ಲಿ ಆತನ ಶವ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಂಗಾರಿನ ಅಬ್ಬರಕ್ಕೆ ಮಹಾರಾಷ್ಟ್ರ ತತ್ತರ , ಜನಜೀವನ ಅಸ್ತವ್ಯಸ್ಥ – Vishwanews24

Leave a Reply