ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ : ಹಿಂಬದಿ ಸವಾರ ಮೃತ್ಯು.. Vishwanews24
ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ : ಹಿಂಬದಿ ಸವಾರ ಮೃತ್ಯು..
ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟ ಘಟನೆ ಇಂದು ಮುಂಜಾವಿನ ವೇಳೆ ಬಂಟ್ವಾಳ ಬಿಸಿರೋಡಿನಲ್ಲಿ ನಡೆದಿದೆ.
ಇಲ್ಲಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತನನ್ನು ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರಿನ ಯಶೋಧರ (25) ಎಂದು ಗುರುತ್ತಿಸಲಾಗಿದೆ. ಈತನ ಸ್ನೇಹಿತ ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ.
ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಬಿಎಸ್ ಯಡಿಯೂರಪ್ಪ – Vishwanews24
ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು,ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ಬೈಕ್ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಉರುಳಿ ಬಿದ್ದಿದೆ.
ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ : ಕಾಪುವಿನ ಯುವಕ ಸಾವು – Vishwanews24
