ಬಟ್ಟೆ ಸ್ವಚ್ಛವಾಗಿಲ್ಲ ಎಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ  – Vishwanews24

Featured, ರಾಜ್ಯ ನ್ಯೂಸ್

ಬಟ್ಟೆ ಸ್ವಚ್ಛವಾಗಿಲ್ಲ ಎಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ 

ಬೆಂಗಳೂರು: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ ಯಾವಗಲೂ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತದೆ. ಮೂಟೆ ಹೊತ್ತುಕೊಂಡಿದ್ದ ರೈತನೋರ್ವ ಹಳೆಯ ಬಟ್ಟೆ ಹಾಕಿದ್ದಾನೆ ಎಂಬ ಕಾರಣಕ್ಕೆ ಮೆಟ್ರೋ ಸಿಬ್ಬಂದಿ ಒಳಗೆ ಬಿಟ್ಟಿಲ್ಲ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು VIPಗಳಿಗೆ ಮಾತ್ರಾ ಮೇಟ್ರೋನಾ. ಬಸವಣ್ಣ ಹುಟ್ಟಿದ ನಾಡಲ್ಲಿ ಸಮಾನತೆ ಎಲ್ಲಿ ಹೋಯಿತು ಎಂದು ಪ್ರಶ್ನಿಸುತ್ತಿದ್ದಾರೆ.

ಹಿಂದಿ ಭಾಷೆಯನ್ನಾಡುವ ರೈತನೊಬ್ಬ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ವೇಳೆ ಲಗೇಜ್ ಪರಿಶೀಲನೆ ಮಾಡುವ ಸಿಬ್ಬಂದಿ ರೈತನನ್ನು ತಡೆದಿದ್ದಾರೆ. ಗಲೀಜು ಬಟ್ಟೆ ಹಾಕಿದ್ದೀರಾ, ತಲೆ ಮೇಲೆ ಮೂಟೆ ಇದೆ ಎಂದು ಹೇಳಿ ರೈತನನ್ನ ಮೆಟ್ರೋದಲ್ಲಿ ಪ್ರಯಾಣಿಸಲು ಅನುಮತಿ ಕೊಟ್ಟಿಲ್ಲ ಎನ್ನವ ವಿಡಿಯೋ ವೈರಲ್ ಆಗಿದೆ.

ಮೂಡಿಗೆರೆ: ಭಂಡಾಜೆ ಫಾಲ್ಸ್ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಪತ್ತೆ ;  ಪ್ರಕರಣ ಸುಖಾಂತ್ಯ – Vishwanews24

Leave a Reply