ಬಯಲಾಟ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ – vishwanews24
ಬಯಲಾಟ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ
ರಾಯಚೂರು: ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. 7 ಜನರು ಕಮಾನು ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಈ ವೇಳೆ ಕಮಾನಿನ ಗೋಡೆ ಕುಸಿದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಅವಘಡದಲ್ಲಿ ನಾಲ್ವರು ಮಹಿಳೆಯರಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ:
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ – vishwanews24
ಗಾಯಾಳುಗಳನ್ನು ಲಕ್ಷ್ಮಿ, ವಿಶಾಲಕ್ಷಿ, ಯಲ್ಲಮ್ಮ ಹಾಗೂ ಬಸಮ್ಮ ಎಂದು ಗುರುತಿಸಲಾಗಿದೆ. ಇವರಿಗೆ ಕಾಲು ಮುರಿದಿದೆ. ಬಸಮ್ಮ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತದೇಹಗಳನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
