ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ – vishwanews24

Featured, ರಾಜ್ಯ ನ್ಯೂಸ್

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ – vishwanews24

ಬರ ಪರಿಹಾರ ವಿಚಾರವಾಗಿ ದೆಹಲಿಗೆ ಸರ್ವಪಕ್ಷ ನಿಯೋಗ ತೆರಳುವ ಬಗ್ಗೆ ಕೇಳಿದಾಗ, “ಸರ್ವಪಕ್ಷ ನಿಯೋಗ ದೆಹಲಿಗೆ ಹೋಗಲಿದೆ, ಪ್ರಧಾನಮಂತ್ರಿಗಳ ಭೇಟಿಗೆ ಸಮಯಾವಕಾಶ ಕೇಳಿದ್ದು, ಉಪಮುಖ್ಯಮಂತ್ರಿಗಳು ಬರ ಪರಿಸ್ಥಿತಿಯ ಆಳವಾದ ಅಧ್ಯಯನ ಮಾಡಿದ್ದಾರೆ. ಈಗ ಮಧ್ಯಂತರ ಪರಿಹಾರ ನೀಡಿ, ನಂತರ ಬರ ಅಧ್ಯಯನ ಮಾಡಿ ಹೆಚ್ಚು ಪರಿಹಾರ ನೀಡಬೇಕು. ವಿರೋಧ ಪಕ್ಷಗಳ ನಾಯಕರು ಹಾಗೂ ಸಂಸದರು ನಮಗೆ ನೆರವು ನೀಡುವ ವಿಶ್ವಾಸವಿದೆ. ಕರ್ನಾಟಕಕ್ಕೆ ನೆರವು ನೀಡಬೇಕಾಗಿರುವುದು ಪ್ರಧಾನಮಂತ್ರಿಗಳ ಕರ್ತವ್ಯ. ಬೇರೆ ರಾಜ್ಯಗಳು ಪ್ರತಿ ಯೂನಿಟ್ ಗೆ 20-22 ರೂ.ವರೆಗೆ ನೀಡಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ನಮ್ಮ ನಾಗರೀಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ನಾವು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಮಧ್ಯೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಹೇರಿ ಅವರು ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡಬೇಕು ಎಂದು ಸೂಚಿಸಲಾಗುವುದು. ಸಾಧ್ಯವಿರುವ ಕಡೆ ಥರ್ಮಲ್ ಕೇಂದ್ರ ಸ್ಥಾಪನೆಗೆ ಸಾಧ್ಯತೆ ಹುಡುಕಲಾಗುತ್ತಿದೆ” ಎಂದರು.

ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  – vishwanews24

Leave a Reply