ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು – vishwanews24
ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವು ; ಕುಟುಂಬಸ್ಥರ ಆಕ್ರಂದನ
ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ (21) ಮೃತ ಬಾಣಂತಿ ಎಂದು ಗುರುತಿಸಲಾಗಿದೆ. ಮಹಾದೇವಿ ಅವರಿಗೆ ಜನವರಿ 25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು.
ಸಿಸೇರಿಯನ್ ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಸಿಸೇರಿಯನ್ ಆದ ಐದು ದಿನಗಳ ಬಳಿಕ ಮಹಾದೇವಿ ಅವರಿಗೆ ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಕುಟುಂಬಸ್ಥರ ಬಳಿ ಹೇಳಿದ್ದಾರೆ. ಆದರೆ, ಶುಕ್ರವಾರ ರಾತ್ರಿ ತೀವ್ರ ಅಸ್ವಸ್ಥವಾಗಿ ಬಾಣಂತಿ ಮಹಾದೇವಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮಹಾದೇವಿ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬಿಮ್ಸ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕಾರ್ಕಳ: ಹೂಡಿಕೆ ಮಾಡಿದ ಹಣ ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು – vishwanews24
