ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ – vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ  ಅವರಿಗೆ ಬಾಂಗ್ಲಾದೇಶದ  ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷಿ ವಿಧಿಸಿದೆ.

ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಹೇಳಿ ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. 2024ರ ಆಗಸ್ಟ್ 5 ರಂದು ಚಂಖರ್‌ಪುಲ್‌ನಲ್ಲಿ ಆರು ಪ್ರತಿಭಟನಾಕಾರರನ್ನು ಮಾರಕ ಆಯುಧಗಳನ್ನು ಬಳಸಿ ಕೊಲ್ಲಲಾಯಿತು. ಈ ಆದೇಶಗಳನ್ನು ಹೊರಡಿಸುವ ಮೂಲಕ ಶೇಖ್ ಹಸೀನಾ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಿದ್ದಾರೆ. ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ತೀರ್ಪಿನಲ್ಲಿ ಹೇಳಿದೆ.

ಉಡುಪಿ: ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕ ಕರ್ತವ್ಯದಿಂದ ವಜಾ – vishwanews24

ಹಸೀನಾ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಪ್ರಕರಣದಲ್ಲಿ ಕೋರ್ಟ್‌ ದೋಷಿ ಎಂದು ಹೇಳಿದೆ.

Leave a Reply