ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು – Vishwanews24

Featured, ರಾಷ್ಟ್ರ ನ್ಯೂಸ್

ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಇಂದು ಬೆಳ್ಳಂಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅವರಿಗೆ ಆಂಜಿಯೋಪ್ಲ್ಯಾಸ್ಟಿ  ಚಿಕಿತ್ಸೆ ನೀಡಲಾಗಿದೆ. ಅಮಿತಾಭ್ ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

81ರ ವಯಸ್ಸಿನ ಅಮಿತಾಭ್ ದಣಿವರಿಯದ ಜೀವ. ಮೊನ್ನೆಯಷ್ಟೇ ಅವರು ಕಲ್ಕಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಮುಂಬೈಗೆ (Mumbai) ಆಗಮಿಸಿದ್ದರು. ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ. ಸತತವಾಗಿ ಕಲ್ಕಿ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ಅವರು, ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದರು.

ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ – Vishwanews24

ದಿಗ್ಗಜರೇ ಒಂದಾಗಿ ನಟಿಸುತ್ತಿರುವ ಕಲ್ಕಿ ಸಿನಿಮಾದ ಬಗ್ಗೆ ಬಿಗ್ ಬಿ, ಎರಡು ದಿನದ ಹಿಂದೆಯಷ್ಟೇ ಬಿಗ್ ಅಪ್ ಡೇಟ್ ನೀಡಿದ್ದರು. ಸಿನಿಮಾ ಶೂಟಿಂಗ್  ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಮೊನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದೆ. ಚಿತ್ರದ ಚಿತ್ರೀಕರಣ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ಅವರು ಮಾಹಿತಿಯನ್ನು ಹಂಚಿಕೊಂಡಿದ್ದರು.

ಬಿಎಸ್‌ವೈ ವಿರುದ್ದ ಫೋಕ್ಸ್‌ ಪ್ರಕರಣ: ಸಿಐಡಿಗೆ ವರ್ಗಾವಣೆ – Vishwanews24

Leave a Reply