ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ವಿಧಿವಶ – vishwanews24

Featured, ರಾಷ್ಟ್ರ ನ್ಯೂಸ್

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ವಿಧಿವಶ

ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್‌ 8ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು.

ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರು ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ತಮಿಳುನಾಡು : ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ; 6 ಮಂದಿ ದುರ್ಮರಣ, , 28 ಜನರಿಗೆ ಗಾಯ – vishwanews24

ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅನೇಕ ಬಾಲಿವುಡ್‌ ತಾರೆಯರು ಅವರನ್ನ ಭೇಟಿ ಮಾಡಲು ಆಸ್ಪತ್ರೆಗೆ ಧಾವಿಸಿದ್ದರು.

ಇದಾದ ಬಳಿಕ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಮಾಡಿಸಿ, ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲು ಕುಟುಂಬ ನಿರ್ಧರಿಸಿತ್ತು.

ಉಡುಪಿ:  ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ : ಸವಾರ ಮೃತ್ಯು – vishwanews24

Leave a Reply