ಬಿ.ಎಸ್.ವೈ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಅನರ್ಹ ಶಾಸಕರು -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅನರ್ಹ ಶಾಸಕರು ಇಂದು ಅಧಿಕೃತವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸಮ್ಮುಖದಲ್ಲಿ ಎಲ್ಲಾ ಅನರ್ಹರು ಕಮಲ ಪಾಳೆಯ ಸೇರಿದರು.  ಅವರಿಗೆ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ನಾಯಕರು ಸ್ವಾಗತಿಸಿದರು. ಈ ಸಂದರ್ಭಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್​ ಕೂಡ ಸಾಕ್ಷಿಯಾದರು.

ಐಎಂಎ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೋಷನ್​ ಬೇಗ್​ ಸೇರ್ಪಡೆಗೆ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಅವರು ಪಕ್ಷಕ್ಕೆ ಸೇರ್ಪಡನೆಯಾಗಿಲ್ಲ

ಭೈರತಿ ಬಸವರಾಜು, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಮುನಿರತ್ನ, ಆನಂದ್ ಸಿಂಗ್, ಹೆಚ್.ವಿಶ್ವನಾಥ್, ಮಹೇಶ್ ಕಮಟಳ್ಳಿ, ಪ್ರತಾಪ್ ಗೌಡ ಪಾಟೀಲ್, ಹೆಚ್.ಸುಧಾಕರ್, ಶಿವರಾಜ್ ಹೆಬ್ಬಾರ್, ಶ್ರೀಮಂತ್ ಪಾಟೀಲ್, ಎಂಟಿಬಿ ನಾಗರಾಜ್, ಕೆ.ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಮತ್ತು ಆರ್. ಶಂಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.