ಬಿಎಸ್ ವೈ ಪ್ರಮಾಣವಚನ : ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪಕ್ಷದ ಎಲ್ಲಾ ನಾಯಕರುಗಳಿಗೆ ಸೂಚನೆ ನೀಡುತ್ತೇನೆ :ದಿನೇಶ್ ಗುಂಡೂರಾವ್ -Vishwanews24
ಬೆಂಗಳೂರು : ಬಿಎಸ್ ವೈ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸದಂತೆ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕ. ಇದು ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಕಿಡಿಕಾರಿದ್ದಾರೆ.
ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸುತ್ತೇನೆ. ಪಕ್ಷದ ಎಲ್ಲಾ ನಾಯಕರುಗಳಿಗೆ ಭಾಗವಹಿಸದಂತೆ ಸೂಚನೆ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ @BSYBJP ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕ.
ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ.
ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸುತ್ತೇನೆ, ಪಕ್ಷದ ಎಲ್ಲಾ ನಾಯಕರುಗಳಿಗೆ ಭಾಗವಹಿಸದಂತೆ ಸೂಚನೆ ನೀಡುತ್ತೇನೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 26, 2019
ಇಂದು ಸಂಜೆ ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಈಗಾಗಲೇ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

