ಬಿಎಸ್‌ವೈ ವಿರುದ್ದ ಫೋಕ್ಸ್‌ ಪ್ರಕರಣ: ಸಿಐಡಿಗೆ ವರ್ಗಾವಣೆ – Vishwanews24

Featured, ರಾಜ್ಯ ನ್ಯೂಸ್

ಬಿಎಸ್‌ವೈ ವಿರುದ್ದ ಫೋಕ್ಸ್‌ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಪ್ರಕರಣ ದಾಖಲಾದ ತಕ್ಷಣ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ: ಬಿಎಸ್ ವೈ ಬಗ್ಗೆ ದಿನೇಶ್ ಗುಂಡೂರಾವ್  – Vishwanews24

ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ಪ್ರಕರಣ ದಾಖಲು – Vishwanews24

Leave a Reply