ಬಿಎಸ್‌ವೈಗೆ ಬಿಗ್‌ ರಿಲೀಫ್‌ : ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ – vishwanews24

Featured, ರಾಜ್ಯ ನ್ಯೂಸ್

ಬಿಎಸ್‌ವೈಗೆ ಬಿಗ್‌ ರಿಲೀಫ್‌ ; ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ  ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ  ಬಿಗ್‌ ರಿಲೀಫ್‌ ಸಿಕ್ಕಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಿಚಾರಣೆಗೆ ತಡೆ ನೀಡಿದೆ.

ನಾವು ಹಿಂದೆಯೂ ಒಗ್ಗಟ್ಟಾಗಿದ್ದೆವು, ಈಗಲೂ ಒಗ್ಗಟ್ಟಾಗಿದ್ದೇವೆ ; ನಮ್ಮಿಬ್ಬರದ್ದು ಒಂದೇ ಸಿದ್ಧಾಂತ : ಸಿದ್ದರಾಮಯ್ಯ – vishwanews24

ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್‌ ಲೂತ್ರಾ ಅವರು ಹೈಕೋರ್ಟ್‌ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ವಾದ ಆಲಿಸಿದ ಸುಪ್ರೀಂ ವಿಚಾರಣೆಗೆ ತಡೆ ನೀಡಿ ಸಿಐಡಿಗೆ ನೋಟಿಸ್‌ ಜಾರಿ ಮಾಡಿದೆ.

ಕರ್ನಾಟಕ ಹೈಕೋರ್ಟ್ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ನವೆಂಬರ್ 13ರ ಆದೇಶದ ವಿರುದ್ಧ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ. ಯಡಿಯೂರಪ್ಪ ಪರವಾಗಿ ಹಿರಿಯ ವಕೀಲರಾದ ಸಿದ್ಧಾರ್ಥ್ ಲೂತ್ರಾ ಮತ್ತು ಸಿದ್ಧಾರ್ಥ್ ದವೆ ವಾದ ಮಂಡಿಸಿದರು. ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೋರ್ವರು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.

ಮಂಗಳೂರು: ಡಿ. 25 ರಿಂದ ಮಂಗಳೂರಿನಿಂದ ನವಿ ಮುಂಬೈಗೆ ವಿಮಾನಸೇವೆ ಆರಂಭ – vishwanews24

 

Leave a Reply