ಬಿಎಸ್‍ಎನ್‍ಎಲ್ ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ : ಕಾಂಗ್ರೆಸ್ ವಾಗ್ದಾಳಿ -Vishwanews24
ಬೆಂಗಳೂರು: ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದು, ಇದೀಗ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅನಂತ್ ಕುಮಾರ್ ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಟ್ವೀಟ್ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್‍ಎನ್‍ಎಲ್ ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ. ಜೊತೆಗೆ ಕೇಂದ್ರ ಬಿಜೆಪಿ ಸರ್ಕಾರ ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿದೆ ಹಾಗಾಗಿ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ ಎಂದು ವಾಗ್ದಾಳಿ ನಡೆಸಿದೆ.
ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಕೇಂದ್ರ @BJP4India ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ
ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ!https://t.co/1JZBZQqWFP
— Karnataka Congress (@INCKarnataka) August 11, 2020
