ಬಿಎಸ್‍ವೈ ಡೈರಿ ಪ್ರಕರಣ : ಡೈರಿಯಲ್ಲಿರೋದು ಯಡಿಯೂರಪ್ಪನವರ ಸಹಿ ಅಲ್ಲ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ 1800 ಕೋಟಿ ಡೈರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಆಪ್ತರು ದಾಖಲೆಯೊಂದನ್ನು ಬಿಡುಗಡೆ ಮಾಡುವ ಮೂಲಕ ಹೊಸ ತಿರುವು ನೀಡಿದ್ದಾರೆ.

ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಯುಡಿಯೂರಪ್ಪನವರದ್ದು ಹೌದೋ? ಅಲ್ಲವೋ? ಎಂಬ ಗೊಂದಲವಿತ್ತು. ಆದರೆ ಇದೀಗ ಡೈರಿಯಲ್ಲಿರೋದು ಯಡಿಯೂರಪ್ಪ ಸಹಿ ಅಲ್ಲವೇ ಅಲ್ಲ ಎಂದು ಹೇಳಲಾಗುತ್ತಿದೆ. ಡೈರಿಯಲ್ಲಿರುವ ಸಹಿಗೂ ಬಿಎಸ್‍ ವೈ  ಸಹಿಗೂ ವ್ಯತ್ಯಾಸ ಇದೆ ಎಂದು ಸಹಿಯ ಅಸಲಿ, ನಕಲಿ ಬಗ್ಗೆ ದಾಖಲೆಯನ್ನು ಯಡಿಯೂರಪ್ಪ ಆಪ್ತರು ಬಿಡುಗಡೆ ಮಾಡಿದ್ದಾರೆ.

2009ರಲ್ಲಿ ಸಚಿವರಾಗಿದ್ದ ಶರದ್ ಪವಾರ್‍ ಗೆ ಬಿಎಸ್‍ ವೈ ಪತ್ರ ಬರೆದಿದ್ದರು. ಈ ಪತ್ರವನ್ನು ಇಂದು ಬಿಎಸ್‍ ವೈ ಆಪ್ತರು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ರಿಲೀಸ್ ಮಾಡಿದ ಡೈರಿಯಲ್ಲಿರುವ ಸಹಿಗೂ ಈ ಸಹಿಗೂ ಇರುವ ವ್ಯತ್ಯಾಸವನ್ನು ವಿವರಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಯೂರಿಯಾ ಬಗ್ಗೆ ಜುಲೈ 2009ರಲ್ಲಿ ಬಿಎಸ್‍ ವೈ ಬರೆದಿದ್ದ ಪತ್ರವನ್ನೂ ಬಿಡುಗಡೆ ಮಾಡುವ ಮೂಲಕ ಸಹಿಯ ಪ್ರತಿ ಅಕ್ಷರ ವ್ಯತ್ಯಾಸ ತೋರಿಸಿ ಮಾರ್ಕ್ ಮಾಡಿ ದಾಖಲೆ ಬಿಡುಗಡೆಗೊಳಿಸಿದ್ದಾರೆ.