ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕುಯಿಲಾಡಿ ಸುರೇಶ್ ನಾಯಕ್.

Featured, ಉಡುಪಿ

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕುಯಿಲಾಡಿ ಸುರೇಶ್ ನಾಯಕ್.

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಇದೇ ಸಂಧರ್ಭದಲ್ಲಿ ವಿವಿಧ ಕಾಪು,ಕಾರ್ಕಳ,ಕುಂದಾಪುರ, ಬೈಂದೂರು, ಉಡುಪಿ ನಗರ ಮಂಡಳ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವೂ ನಡೆಯಿತು

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಉಡುಪಿ- ಮಂಗಳೂರು- ಚಿಕ್ಕಮಗಳೂರು ಬಿಜೆಪಿ ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ ,ಕುತ್ಯಾರ್ ನವೀನ್ ಶೆಟ್ಟಿ ಉಪಸ್ಥಿತರಿದ್ದರು.