ಬಿಜೆಪಿ, ಜೆಡಿಎಸ್ ಅವರ ಟಾರ್ಗೆಟ್ ನಾನೇ , ಎಲ್ಲರಿಗೂ ನಾನು ಅಂದ್ರೆ ಭಯ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಮೈಸೂರು :ಎಲ್ಲರಿಗೂ ನಾನು ಅಂದ್ರೆ ಭಯ ಇರಬೇಕು. ಅದಕ್ಕಾಗಿ ಎಲ್ಲರೂ ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಹಾಗೂ ಅನರ್ಹ ಶಾಸಕರ ಟಾರ್ಗೆಟ್ ನಾನೇ, ಇದನ್ನು ನೋಡಿದರೆ ಅವರಿಗೆಲ್ಲ ನನ್ನ ಮೇಲೆ ಭಯ ಇರಬೇಕು. ಅವರೆಲ್ಲ ಹತಾಶರಾಗಿದ್ದಾರೆ. ಅದಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಾರೆ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ಸಿನಲ್ಲಿ ಏಕಾಂಗಿಯಲ್ಲ. ಕಾಂಗ್ರೆಸ್ ಪಕ್ಷ ಯಾವತ್ತೂ ಯಾರನ್ನೂ ಏಕಾಂಗಿ ಮಾಡಲ್ಲ. ಯಡಿಯೂರಪ್ಪರಿಗೆ ನಾನು ಏಕಾಂಗಿ ಆಗಬೇಕು ಅನಿಸಿರಬಹುದು. ಆದರೆ ಅವರ ಆಸೆ ಈಡೇರುವುದಿಲ್ಲ ಎಂದು ತಿಳಿಸಿದರು.