ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ರಾಮಪ್ಪ ಲಮಾಣಿ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ರಾಮಪ್ಪ ಲಮಾಣಿ

ಬೆಂಗಳೂರು: ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ರಾಮಪ್ಪ ಲಮಾಣಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ‌ ರಾಮಪ್ಪ ಲಮಾಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಸಂಧರ್ಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಎಚ್.ಕೆ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ – Vishwanews24

Leave a Reply