ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ, ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ : ಶ್ರೀರಾಮುಲು – vishwanews24

Featured, ರಾಜ್ಯ ನ್ಯೂಸ್

ಮಾತನಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು ಎಂದು ನಾನು ಇಷ್ಟು ದಿನ ಸುಮ್ಮನೆ ಇದ್ದೆ ..

ನಮ್ಮಂಥವರನ್ನು ಅವಮಾನ ಮಾಡಿದರೆ ಸುಮ್ಮನಿರಲ್ಲ, ಬೀದಿಗೆ ಇಳಿದು ಮಾತನಾಡುತ್ತೇನೆ..

ಪಕ್ಷ ಬಿಡುವ ಸಂದರ್ಭ ಬಂದಲ್ಲಿ ಹೇಳಿಯೇ ಹೋಗುತ್ತೇನೆ : ಶ್ರೀರಾಮುಲು

ಗದಗ: ‘ಮಾತನಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು ಎಂದು ನಾನು ಇಷ್ಟು ದಿನ ಸುಮ್ಮನೆ ಇದ್ದೆ. ಆದರೆ, ಇನ್ನು ಮುಂದೆ ಸುಮ್ಮನೆ ಇರೋದಿಲ್ಲ. ಇನ್ನು ಮುಂದೆ ನಾನು ಯಾರ ಮುಲಾಜೂ ಇಲ್ಲದೆ ಮಾತನಾಡುತ್ತೇನೆ. ಈ ಬಾರಿ ನಮ್ಮಂಥವರನ್ನು ಅವಮಾನ ಮಾಡಿದರೆ ಸುಮ್ಮನಿರಲ್ಲ, ಬೀದಿಗೆ ಇಳಿದು ಮಾತನಾಡುತ್ತೇನೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತ ನಾಡಿ, ದೆಹಲಿಗೆ ಅಪಾಯಿಂಟ್‌ಮೆಂಟ್ ಮೇಲೆಯೇ ಹೋಗಬೇಕು ಎಂದೇನೂ ಇಲ್ಲ, ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ. ಮುಂದೆಯೂ ಹೋಗುತ್ತೇನೆ. ಎಲ್ಲ ವಿಚಾರವನ್ನು ವನ್ನು ಹೈಕಮಾಂಡ್‌ಗೆ ಹೇಳಿ ಬರುತ್ತೇನೆ. ನಾನು ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಪಕ್ಷ ಬಿಡುವ ಸಂದರ್ಭ ಬಂದಲ್ಲಿ ಹೇಳಿಯೇ ಹೋಗುತ್ತೇನೆ. ಆದರೆ ಬಡವರು, ಶ್ರಮಿಕರು, ರೈತರ ಪರ ಇರುವ ಕಾರ್ಯಕರ್ತರ ಜತೆ ಇರುತ್ತೇನೆ ಎಂ ಎಂದು ಹೇಳಿದರು.

ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚನೆ – vishwanews24

ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ. ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಒಂದು ವೇಳೆ, ನಾನು ಹೋಗಬೇಕು ಅಂದುಕೊಂಡರೆ ನನ್ನನ್ನು ತಡೆಯೋಕೆ ಆಗುತ್ತಾ? ಜೈಲಿನಲ್ಲಿ ಇಡೋಕ್ಕೆ ಆಗುತ್ತಾ? ಈಗಿನ ಕಾಲದಲ್ಲಿ ಯಾರು, ಯಾರ ಮಾತನ್ನೂ ಕೇಳೋಲ್ಲ ಎಂದರು.

 

 

 

Leave a Reply