ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇಲ್ಲ. 15 ಕ್ಷೇತ್ರಗಳಲ್ಲಿ ಒಂದನ್ನೂ ಬಿಜೆಪಿ ಗೆಲ್ಲುವುದು ಕಷ್ಟ :ದಿನೇಶ ಗುಂಡೂರಾವ್ -Vishwanews24
ಬೆಳಗಾವಿ: ಬಿಜೆಪಿಯವರಿಗೆ 15 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇಲ್ಲ.ಹೀಗಾಗಿ ಆಪರೇಷನ್ ಕಮಲ ಮುಂದುವರೆಸುವ ಮಾತು ಆಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇಲ್ಲ. 15 ಕ್ಷೇತ್ರಗಳಲ್ಲಿ ಒಂದನ್ನೂ ಬಿಜೆಪಿ ಗೆಲ್ಲುವುದು ಕಷ್ಟ. ಸರ್ಕಾರ ರಾಜ್ಯದಲ್ಲಿ ಇದೆಯೋ ಇಲ್ಲವೋ ಎನ್ನುವ ಹಾಗೆ ಆಗಿದೆ. 2 ತಿಂಗಳಿಂದ ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಚುನಾವಣೆಗೋಸ್ಕರ ಸರ್ಕಾರ ಎಲ್ಲವನ್ನೂ ಬಿಟ್ಟಿದೆ. ಚುನಾವಣೆಗೆ ಹಣ ಮಾಡಲು ವರ್ಗಾವಣೆ ದಂಧೆ ಸೇರಿ ಕೆಲಸದಲ್ಲಿ ಸರ್ಕಾರ ತೊಡಗಿದೆ. ರಾಜ್ಯದಲ್ಲಿ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸ್ವಾರ್ಥ ಉದ್ದೇಶಕ್ಕಾಗಿ ಅನೇಕರು ಬಿಜೆಪಿಗೆ ಹೋಗಿದ್ದಾರೆ. ಮೈತ್ರಿ ಸರ್ಕಾರ ರಚನೆ ನಂತರದ ಎಲ್ಲಾ ಬೆಳವಣಿಗೆ ಜನ ನೋಡಿದ್ದಾರೆ. ಜನರಿಗೆ ಅನರ್ಹ ಶಾಸಕರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿದೆ ಎಂದು ಅನರ್ಹರ ವಿರುದ್ಧ ಕಿಡಿಕಾರಿದರು.
