ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಪಿ ನಡ್ಡಾ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದ ಜನತೆಯಿಂದಲೇ, ಜನತೆಗಾಗಿ, ಜನತೆಗೋಸ್ಕರ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಪಿ ನಡ್ಡಾ

BPL ಕುಟುಂಬದವರಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು, 5ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್​​ ಅವರು ಉಪಸ್ಥಿತರಿದ್ದರು.

ಜನರ ಹಿತದೃಷ್ಟಿಯಿಂದ ಪ್ರಣಾಳಿಕೆ ತಯಾರಿಸಿದ್ದೇವೆ

ಜನರ ಹಿತದೃಷ್ಟಿಯನ್ನಿಕೊಟ್ಟುಕೊಂಡು ಪ್ರಣಾಳಿಕೆ ತಯಾರಿಸಿದ್ದೇವೆ. ಪ್ರಣಾಳಿಕೆ ರಾಜ್ಯ ಸರ್ಕಾರ ನಡೆಯುವ ದಿಕ್ಕನ್ನು ತೋರಿಸುತ್ತದೆ. ಸುಮಾರು 2 ವರ್ಷ ಕೊರೊನಾದಿಂದ ಆರ್ಥಿಕ ಕುಸಿತ ಆಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಬಿಪಿಎಲ್​ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್​ ಹಾಲು

ಬಿಪಿಎಲ್​ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್​ ಹಾಲು ನೀಡುತ್ತೇವೆ. 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಸಿರಿಧಾನ್ಯ ನೀಡುತ್ತೇವೆ ಎಂದು ಹೇಳಿದರು.

ಕಾರ್ಕಳ: ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಬಿರುಸಿನ ಮತ ಪ್ರಚಾರ – Vishwanews24

ಬಿಜೆಪಿ ಪ್ರಜಾ ಪ್ರಣಾಳಿಕೆಯಲ್ಲಿ ಏನಿದೆ

1. ಬಿಪಿಎಲ್​​ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್​ ಸಿಲಿಂಡರ್​

2. ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ

3. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್​ ಆಹಾರ ಕೇಂದ್ರ ಸ್ಥಾಪನೆ

4. ಕಡಿಮೆ ಬೆಲೆಯಲ್ಲಿ ಗುಣಮಟ್ಟಣದ ಆಹಾರ ವಸ್ತುಗಳ ಮಾರಾಟ

5. ಬಿಪಿಎಲ್​ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ

6. ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್​

7. ‘ಪೋಷಣೆ ಯೋಜನೆ’ಯಡಿ ಹಾಲು, ಪಡಿತರ ಕಿಟ್​ ವಿತರಣೆ

8. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಭರವಸೆ

9. ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ

10. ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಸ್ಥಾಪನೆಯ ಭರವಸೆ

11. ಎಸ್​​ಸಿ, ಎಸ್​ಟಿ ಮಹಿಳೆಯರಿಗಾಗಿ ಈ ಯೋಜನೆ ಜಾರಿಗೆ ನಿರ್ಧಾರ

12. ವಿಶ್ವೇಶ್ವರಯ್ಯ ವಿದ್ಯಯೋಜನೆಯಡಿ ಸರ್ಕಾರಿ ಶಾಲೆ ಮೇಲ್ದರ್ಜೆಗೆ

ಇಂದು ಮಂಗಳೂರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ – Vishwanews24

Leave a Reply