ಬಿಜೆಪಿ ಮತ್ತೊಂದು ವಿಕೆಟ್ ಪತನ – ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ  – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ 

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಘೋಷಣೆ ಮಾಡಿದ್ದಾರೆ.

ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಮಧ್ಯಾಹ್ನದ ಬಳಿಕ ತಿಳಿಸುವೆ ಎಂದು ಸ್ಪಷ್ಟಪಡಿಸಿದರು.

 

Leave a Reply