ಬಿಜೆಪಿ ಮುಖಂಡನ ಬರ್ಬರ ಹತ್ಯೆ: ಇದೊಂದು ಹೇಯಕೃತ್ಯ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ : ಸಿಎಂ ಬೊಮ್ಮಾಯಿ ಸಂತಾಪ – VIshwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಬಿಜೆಪಿ ಮುಖಂಡನ ಬರ್ಬರ ಹತ್ಯೆ: ಇದೊಂದು ಹೇಯಕೃತ್ಯ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ : ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಅಂತ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಕಾರ್ಯಕರ್ತನನ್ನು ತಲವಾರಿನಿಂದ ಕಡಿದು ಕೊಲೆ-ದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು: vishwanews24 –

 

ಇದನ್ನೂ ಓದಿ : ಮಂಗಳೂರು: ಬೆಳ್ಳಾರೆ ಬಿಜೆಪಿ ಮುಖಂಡನ ಬರ್ಬರ ಹತ್ಯೆ : ಮೂರು ತಾಲೂಕು ಸ್ವಯಂಪ್ರೇರಿತ ಬಂದ್‌ಗೆ ಕರೆ – Vishwanews24 

 

Leave a Reply