ಬಿಜೆಪಿ ಮುಖಂಡರ ಫೋಟೋಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್ – VIshwanews24

Featured, ದಕ್ಷಿಣ ಕನ್ನಡ

ತಪ್ಪಿತಸ್ಥ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಳಿನ್‌ ಕುಮಾರ್ ಆಗ್ರಹ

ಮಂಗಳೂರು : ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್‌ ಅಳವಡಿಸಿ ಚಪ್ಪಲಿ ಹಾರ ಹಾಕಿದ ಆರೋಪದ ಮೇಲೆ ಬಂಧಿತರಾದವರಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ನಳಿನ್‌ ಕುಮಾರ್‌ ಕಟೀಲ್‌, ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ.

ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply